ನಾಡದ್ರೋಹಿ ಎಂಇಎಸ್ ಗೆ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಅವರ ನಿರ್ಧಾರ ನಿರಾಸೆ ಮೂಡಿಸಿದೆ. ನವೆಂಬರ್ 1ರಂದು ಬೆಳಗಾವಿಯಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಿದ್ದು, ಆ ದಿನ ಯಾವುದೇ ರೀತಿ ಕರಾಳ ದಿನಾಚರಣೆಗೆ ಅನುಮತಿ ಕೊಡುವುದಿಲ್ಲ ಎಂದು, ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಖಡಕ್ ಆಗಿ ಸಂದೇಶ ರವಾನಿಸಿದ್ದಾರೆ.
ಕನ್ನಡ ರಾಜ್ಯೋತ್ಸವ ಹಿನ್ನೆಲೆ ಕನ್ನಡ ಪರ ಸಂಘಟನೆಗಳ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ಘೋಷಣೆ ಮಾಡಿ, ಮೊಹಮ್ಮದ್ ರೋಷನ್ ಅವರು ಕನ್ನಡ ಪ್ರೇಮ ಮೆರೆದಿದ್ದಾರೆ. ಯಾರೇ ಕರಾಳ ದಿನಾಚರಣೆಗೆ ಮುಂದಾದ್ರೂ ಪೊಲೀಸರು ಕೇಸ್ ದಾಖಲಿಸುತ್ತಾರೆ ಎಂಬ, ಜಿಲ್ಲಾಡಳಿತದ ನಿರ್ಧಾರಕ್ಕೆ ಕನ್ನಡ ಹೋರಾಟಗಾರರು ಚಪ್ಪಾಳೆ ತಟ್ಟಿದ್ದಾರೆ.